ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಸಾರ್ವತ್ರಿಕ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷದ ನಾಯಕರಿಗೆ ತಲೆ ಕೆಟ್ಟಿದೆ ಎಂದು ಆರ್ ಅಶೋಕ್ ಚಾಟಿ ಬೀಸಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ವಿರುದ್ಧ ನ್ಯಾಯಾಲಯವು ಮೇಲ್ಮನವಿ ಸಲ್ಲಿಸಿದೆ. ರಾಹುಲ್ ಗಾಂಧಿ ಸೇರಿದಂತೆ ಹಲವರನ್ನು ವಿಚಾರಣೆಗೆ ಒಳಪಡಿಸಿದೆ. ಶಿವರಾಜ್ ತಂಗಡಗಿ ಕೂಡ ನಾಲಗೆ ಹರಿಬಿಟ್ಟಿದ್ದಾರೆ. ಅವರು ಸೋಲಿನ ಭಯದಿಂದ ಇದನ್ನು ಹೇಳುತ್ತಿದ್ದಾರೆ. ಸಂಸ್ಕೃತಿಯನ್ನು ಕಡೆಗಣಿಸುವ ಹೇಳಿಕೆಗಳನ್ನು ಸಚಿವರು ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಉಂಟಾಗಿದ್ದು, ಜನರು ಪರದಾಡುತ್ತಿದ್ದಾರೆ. ಬಹಳ ದಿನಗಳಿಂದ ಕೆರೆ ತುಂಬಿಲ್ಲ, ಮಣ್ಣು ತಿಂತಿದ್ರಾ?ನೀರು ಕೋಡಲು ಆಗದವರು ನೀರಾವರಿ ಸಚಿವರು. ಬ್ರ್ಯಾಂಡ್ ಬೆಂಗಳೂರು ಬೈಬೈ ಬೆಂಗಳೂರು ಆಗಿದೆ. ಕಲುಷಿತ ನೀರು ಕುಡಿದು ಅನಾರೋಗ್ಯಕ್ಕಿಡಾಗಿದ್ದಾರೆ. ರಾಜ್ಯ ಸರ್ಕಾರ ಏನು ಮಾಡುತ್ತಿದ್ದೆ ಎಂದು ಪ್ರಶ್ನಿಸಿದ್ದಾರೆ.