ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದರು. ಇನ್ನು ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತಿತರರು ಉಪಸ್ಥಿತರಿದ್ದರು.

ಲೋಕಸಭೆ ಚುನಾವಣೆಗೆ ಇಂದಿನಿಂದ ರಾಜ್ಯದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಹೊರಬಿದ್ದಿದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನವಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.

ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಏಪ್ರಿಲ್ 8 ಕೊನೆಯ ದಿನವಾಗಿದೆ. ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!