ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ದುಮಿ ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಮತ್ತು ಆಕೆಯ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಸಿಲಿಂಡರ್ ಸ್ಫೋಟಗೊಂಡ ಸ್ಥಳಕ್ಕೆ ಪೊಲೀಸರು ಮತ್ತು ಫೋರೆನ್ಸಿಕ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಕುರಿತು ಹೆಚ್ಚಿನ ವಿವರಗಳನ್ನು ತನಿಖೆ ನಂತರ ಅಧಿಕಾರಿಗಳು ನಿಖರ ಕಾರಣವನ್ನ ತಿಳಿಸಲಿದ್ದಾರೆ.