ಹೊಸದಿಗಂತ ವರದಿ ಬಳ್ಳಾರಿ:
ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರ ವಹಿಸಿಕೊಂಡು ಕೆಲವೇ ಘಂಟೆಗಳಲ್ಲಿ ಅಮಾನತುಗೊಂಡಿದ್ದ ಪವನ್ ನೆಜ್ಜೂರ್ ಅವರ ಬೆನ್ನಲ್ಲೇ ಇದೀಗ ಬಳ್ಳಾರಿ ವಲಯದ ಐಜಿಪಿ ವರ್ತಿಕಾ ಕಟಿಯಾರ್ ಅವರನ್ನು ಸರ್ಕಾರ ಎತ್ತಂಗಡಿ ಮಾಡಿ ಆದೇಶ ಹೊರಡಿಸಿದೆ.
ತೆರವಾದ ಸ್ಥಾನಕ್ಕೆ ಹರ್ಷ ಗುಪ್ತಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಎಸ್ಪಿ ಪವನ್ ನೆಜ್ಜೂರ್ ಅವರು ಘಟನೆಗೆ ಸಂಬಂಧಿಸಿ ಅಮಾನತ್ತುಗೊಂಡಿದ್ದು, ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ಅವರನ್ನು ಪ್ರಕರಣಕ್ಕೆ ಸಂಬಂಧಿಸಿ ಪ್ರಭಾರಿಯನ್ನಾಗಿ ಸರ್ಕಾರ ನೇಮಕ ಮಾಡಲಾಗಿತ್ತು. ಮತ್ತೆ ಸರ್ಕಾರ ನೂತನ ಎಸ್ಪಿಯನ್ನಾಗಿ ಡಾ.ಸುಮನ್ ಡಿ.ಪನ್ನೇಕರ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.
ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ: ಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆ

