ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿಗರು ಬಿಸಿಲಿಗೆ ಹೈರಾಣಾಗಿದ್ದಾರೆ. ಐದು ವರ್ಷಗಳಲ್ಲಿ ದಾಖಲಾಗದಷ್ಟು ಬಿಸಿಲು ಈ ಬಾರಿ ದಾಖಲಾಗಿದೆ.
ಬೆಂಗಳೂರು ನಗರದಲ್ಲಿ ಶುಕ್ರವಾರ ಗರಿಷ್ಠ ತಾಪಮಾನ 36.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ಕಳೆದ ಐದು ವರ್ಷಗಳಲ್ಲೇ ಅತಿ ಹೆಚ್ಚಿನದಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇದು ಕಳೆದ 15 ವರ್ಷಗಳಲ್ಲಿ ನಾಲ್ಕನೇ ಅತಿ ಹೆಚ್ಚು ಮತ್ತು ಕಳೆದ 10 ವರ್ಷಗಳಲ್ಲಿ ಮೂರನೇ ಅತಿ ಹೆಚ್ಚಿನದ್ದಾಗಿದೆ.
ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಾದ್ಯಂತ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ. ಕಲಬುರಗಿ ಮತ್ತು ಬಾಗಲಕೋಟದಲ್ಲಿ ಕ್ರಮವಾಗಿ 40.9 ಮತ್ತು 40.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ ಮತ್ತು ಕೊಪ್ಪಳದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.