ಹೊಸದಿಗಂತ ವರದಿ,ಬೆಂಗಳೂರು:
ನಮ್ಮ ಮೆಟ್ರೋ ಕಾಮಗಾರಿ ಹಿನ್ನೆಲೆ ನಗರದ ಬನ್ನೇರುಘಟ್ಟ ಮುಖ್ಯ ರಸ್ತೆಯ ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಏ.1ರಿಂದ 2025ರ ಮಾ.30 ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಿದೆ.
ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ಕಾಮಗಾರಿ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಮಾರ್ಗವನ್ನು ಮತ್ತು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರವನ್ನು ಒಂದು ವರ್ಷಗಳ ಕಾಲ ಸ್ಥಗಿತಗೊಳಿಸಲಿದ್ದು, ವಾಹನ ಸವಾರರ ಅನುಕೂಲಕ್ಕಾಗಿ ಪರ್ಯಾಯ ಮಾರ್ಗಗಳನ್ನು ಬಿಎಂಆರ್‌ಸಿಎಲ್ ಸೂಚಿಸಿದೆ.
ಪರ್ಯಾಯ ಮಾರ್ಗಗಳು: ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಡೈರಿ ವೃತ್ತದ ಕಡೆಯಿಂದ ಚಲಿಸುವ ವಾಹನಗಳು, ಆನೆಪಾಳ್ಯ ಜಂಕ್ಷನ್ ಕಡೆಗೆ ಚಲಿಸಬೇಕಾದ ವಾಹನಗಳು ಮೈಕೋ ಸಿಗ್ನಲ್‌ನಲ್ಲಿ ಬಲಕ್ಕೆ ತಿರುಗಿ ಭೋಷ್‌ಲಿಂಕ್ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್‌ಗೆ ತಲುಪಿ ಎಡಕ್ಕೆ ತಿರುಗಿ ಚಲಿಸಬೇಕು. ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ವೃತ್ತದ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. ಡೈರಿ ವೃತ್ತದ ಶಾಂತಿನಗರ ಕಡೆಗೆ ಚಲಿಸುವ ವಾಹನಗಳು ವಿಲ್ಸನ್ ಗಾರ್ಡನ್‌ನ 7ನೇ ಮುಖ್ಯ ರಸ್ತೆಯಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳಬೇಕು ಎಂದು ಬಿಎಂಆರ್‌ಸಿಎಲ್ ಪ್ರಕಣೆಯಲ್ಲಿ ತಿಳಿಸಿದೆ.