ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೌರವರು ದ್ರೌಪದಿ ವಸ್ತ್ರಾಪಹರಣ ಮಾಡಿದ ಹಾಗೆ ಕೌರವ ವಂಶಸ್ಥರಾದ ಸಿದ್ದರಾಮಯ್ಯ ಸರ್ಕಾರದಲ್ಲಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ದೌರ್ಜನ್ಯ ನಡೆದಿದೆ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ್ ಸಿಎಂ, ಡಿಸಿಎಂ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಹುಬ್ಬಳ್ಳಿ ಘಟನೆ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಮಹಿಳೆಯರು ಮೇಲೆ ಹೀಗೆ ಆದ ಘಟನೆ ನಾಗರಿಕ ಸಮಾಜ ಬೆಚ್ಚಿ ಬೀಳುವ ಪ್ರಕರಣ. ಒಬ್ಬ ಮಹಿಳೆಯನ್ನ ಪೊಲೀಸರು ಸರ್ಕಾರದ ಅಣತಿ ಮೇಲೆ ನಗ್ನ ಮಾಡಿದ್ದಾರೆ. ಇದು ಭಯಾನಕ ಘಟನೆ. ಪೊಲೀಸರೇ ಬಲಾತ್ಕಾರ ಮಾಡಿ ಬಟ್ಟೆ ಕಳಚಿ ಆಕೆಯನ್ನ ಎಳೆದುಕೊಂಡು ಹೋಗಿದ್ದಾರೆ. ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡಿದೆ. ಯಾವ ರೀತಿ ಸರ್ಕಾರ ಇದು. ಇದು ಅಕ್ಷಮ್ಯ ಅಪರಾಧ ಎಂದು ವಾಗ್ದಾಳಿ ನಡೆಸಿದರು.

