ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆಯೊಂದಕ್ಕೆ ಬೆಂಕಿ ತಗುಲಿ ಕುಟುಂಬವೊಂದು ಸಾವನ್ನಪ್ಪಿರುವ ಘಟನೆ ಗುಜರಾತ್ ನ ದ್ವಾರಕಾದಲ್ಲಿ ನಡೆದಿದೆ.
ಅನಾಹುತಕ್ಕೆ ಕಾರಣ ಶಾರ್ಟ್ ಸರ್ಕ್ಯೂಟ್ ಎನ್ನಲಾಗಿದ್ದು, ಇದರಿಂದ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಇಬ್ಬರು ಮಕ್ಕಳು ಮತ್ತು ದಂಪತಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮೃತದೇಹವನ್ನು ವೈದ್ಯಕೀಯ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನೆ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.