ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿ ನ್ಯೂಸ್ಕ್ಲಿಕ್ ಹಾಗೂ ಅದರ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ವಿರುದ್ಧ ದಿಲ್ಲಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಚೀನಾ ಪರವಾಗಿರುವ ಬಗ್ಗೆ ಪ್ರಬೀರ್ ಹಾಗೂ ಅವರ ಮಾಲಕತ್ವದ ಪೋರ್ಟಲ್ನ್ನು ಆರೋಪಿಗಳು ಎಂದು ದೋಷಾರೋಪ ಪಟ್ಟಿಯಲ್ಲಿ ದಾಖಲಿಸಲಾಗಿದೆ. ಸುಮಾರು 8 ಸಾವಿರ ಪುಟಗಳ ಈ ದೋಷಾರೋಪ ಪಟ್ಟಿಯನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಹರ್ದೀಪ್ ಕೌರ್ ಅವರ ಎದುರು ದಿಲ್ಲಿ ಪೊಲೀಸರು ಸಲ್ಲಿಸಿದರು. ಈ ಕುರಿತ ವಿಚಾರಣೆಯನ್ನು ಏ.16ಕ್ಕೆ ನಿಗದಿಗೊಳಿಸಲಾಗಿದೆ.