ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಕೆ. ಬಳ್ಳಕಟ್ಟೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅತಿವೇಗದ ಚಾಲನೆ ಹಾಗೂ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಎಲ್ಲರೂ ತಮಿಳುನಾಡು ಮೂಲದವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ದಾವಣಗೆರೆಯ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.