ಚುನಾವಣೆಗೆ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ‘ಕೈ’ ಪಡೆ: ಘಟಾನುಘಟಿ ನಾಯಕರ ಹೆಸರು ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆ ಹತ್ತಿರವಿದ್ದು, ಈ ಬಾರಿ ಕೇಂದ್ರದ ಉಸ್ತುವಾರಿಯನ್ನು ಕಾಂಗ್ರೆಸ್ ವಹಿಸಿಕೊಳ್ಳಲು ಸಜ್ಜಾಗಿದೆ. ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು, ಪ್ರಚಾರ, ಸಭೆಗಳು ಆರಂಭವಾಗಿವೆ. ಕಾಂಗ್ರೆಸ್ ತನ್ನ ಪ್ರಚಾರಕರ ಪಟ್ಟಿಯನ್ನು ಪ್ರಕಟಿಸಿದೆ. ಲೋಕಸಭೆ ಚುನಾವಣೆಗೆ ಬಿಡುಗಡೆ ಮಾಡಿರುವ ಪ್ರಮುಖ ಕಾಂಗ್ರೆಸ್ ಪ್ರಚಾರಕರ ಪಟ್ಟಿಯಲ್ಲಿ 40 ಘಟಾನುಘಟಿ ನಾಯಕರ ಹೆಸರುಗಳಿವೆ.

ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ್, ಜೈರಾಮ್ ರಮೇಶ್, ಎಂ.ವೀರಪ್ಪ ಮೊಯ್ಲಿ, ಲಕ್ಷ್ಮಣ ಸವದಿ, ಬಿ.ವಿ.ಶ್ರೀನಿವಾಸ್, ಕೆ.ಜೆ.ಜಾರ್ಜ್, ಬಿ.ಕೆ.ಹರಿಪ್ರಸಾದ್, ವಿನಯ್ ಕುಮಾರ್ ಸೊರಕೆ, ಆರ್.ವಿ.ದೇಶಪಾಂಡೆ, ಡಾ.ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಹೆಚ್.ಎಂ.ರೇವಣ್ಣ, ಬಿ.ಸೋಮಶೇಖರ್, ಜಿ.ಸಿ.ಚಂದ್ರಶೇಖರ್, ಉಮಾಶ್ರೀ, ಸೈಯದ್ ನಾಸಿರ್ ಹುಸೇನ್, ಜಮೀರ್ ಅಹ್ಮದ್, ಮಧು ಬಂಗಾರಪ್ಪ, ವಿ.ಎಸ್.ಉಗ್ರಪ್ಪ, ಎಲ್.ಹನುಮಂತಯ್ಯ, ಪಿಜಿಆರ್ ಸಿಂಧ್ಯಾ, ಅಭಿಷೇಕ್ ದತ್, ಸತೀಶ್ ಜಾರಕಿಹೊಳಿ, ಪಿ.ಟಿ.ಪರಮೇಶ್ವರ ನಾಯ್ಕ್, ಡಾ.ಪುಷ್ಪಾ ಅಮರನಾಥ್, ತನ್ವೀರ್ ಸೇಠ್, ಮಯೂರ್ ಜಯಕುಮಾರ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!