ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿಸಿ ಇಂಡಿಯಾ ಮೈತ್ರಿ ಒಕ್ಕೂಟ ದೆಹಲಿ ರಾಮಲೀಲಾ ಮೈದಾನದಲ್ಲಿ ಬೃಹತ್ ರ್ಯಾಲಿ ನಡೆಸುತ್ತಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಗವಹಿಸಿ, ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು. ತಕ್ಷಣವೇ ಬಂಧನದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ಇಂಡಿಯಾ ಒಕ್ಕೂಟದ 5 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟ ಅವರು, ಈ ಪೈಕಿ ಮೊದಲ ಬೇಡಿಕೆ ಕೇಜ್ರಿವಾಲ್ ಹಾಗೂ ಸೊರನೆ ಬಿಡುಗಡೆಯಾಗಿದ್ದರೆ, ಎರಡನೇ ಬೇಡಿಕೆ, ಚುನಾವಣಾ ಬಾಂಡ್ ಮೂಲಕ ಬಿಜೆಪಿ ಪಡೆದಿರುವ ಹಣದ ಕುರಿತು ಎಸ್‌ಐಟಿ ತನಿಖೆಯಾಗಬೇಕು ಎಂದು ಆಗ್ರಹಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಆಯೋಗ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಬೇಕು. ಇಡಿ, ಸಿಬಿಐ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ತನ್ನಿಷ್ಟಕ್ಕೆ ಬಳಸಿಕೊಳ್ಳುವುದನ್ನು ಚುನಾವಣಾ ಆಯೋಗ ತಡೆಯಬೇಕು. ವಿಪಕ್ಷಗಳನ್ನು ಆರ್ಥಿಕವಾಗಿ ದುರ್ಬಲಗೊಳಿಸುವ ಕ್ರಮವನ್ನು ತಡೆಯಬೇಕು ಎಂದು ಒಟ್ಟು 5 ಬೇಡಿಕೆಗಳನ್ನು ಇಂಡಿಯಾ ಮೈತ್ರಿ ಒಕ್ಕೂಟ ಮುಂದಿಟ್ಟಿದೆ.
ಅರವಿಂದ್ ಕೇಜ್ರಿವಾಲ್ ಬಂಧನ ಬೆನ್ನಲ್ಲೇ ಆಮ್ ಆದ್ಮಿಪಾರ್ಟಿ ದೇಶಾದ್ಯಂತ ಪ್ರತಿಭಟನೆ ನಡೆಸಿತ್ತು. ಇದೀಗ ಇಂಡಿಯಾ ಒಕ್ಕೂಟ ರಾಮಲೀಲಾ ಮೈದಾನದಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಂಡಿದೆ. ಪ್ರಜಾಪ್ರಭುತ್ವ ಉಳಿಸಿ ಎಂದು ಹೋರಾಟ ನಡೆಸುತ್ತಿದೆ. ಬಿಜೆಪಿ ಸರ್ಕಾರ ಇಡಿ, ಸಿಬಿಐ ಅಸ್ತ್ರ ಬಳಸಿಕೊಂಡು ವಿಪಕ್ಷಗಳ ಮೇಲೆ ದ್ವೇಷ ಸಾಧಿಸುತ್ತಿದೆ. ಈ ಮೂಲಕ ಪ್ರಜಾಪ್ರಭುತ್ವದ ಕಗ್ಗೂಲೆ ಮಾಡುತ್ತಿದೆ ಎಂದು ಇಂಡಿಯಾ ಮೈತ್ರಿ ಒಕ್ಕೂಟದ ನಾಯಕರು ಆರೋಪಿಸಿದ್ದಾರೆ.
Is she ordering judiciary?