ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್‌ರಿಂದ ನಾಮಪತ್ರ ಸಲ್ಲಿಕೆ

ದಿಗಂತ ವರದಿ ಮೈಸೂರು: 

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣ ರಾಜ ಒಡೆಯರ್ ಅವರು ಸೋಮವಾರ ನಾಮಪತ್ರ ಸಲ್ಲಿಕೆ.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ತಾಯಿ ಪ್ರಮದಾದೇವಿ ಒಡೆಯರ್, ಶಾಸಕ ಟಿ.ಎಸ್. ಶ್ರೀವತ್ಸ ಮತ್ತಿನ್ನಿಬ್ಬರು ಹಾಜರಿದ್ದರು.

ಈ ಮೊದಲು ಅಭ್ಯರ್ಥಿ ಯದುವೀರ್ ಅವರೇ ಖುದ್ದು ವಿಡಿಯೋ ಸಂದೇಶದ ಮೂಲಕ ಏ. ೩ ರಂದು ನಾಮಪತ್ರ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ, ದಿಢೀರ್ ಬೆಳವಣಿಗೆಯಲ್ಲಿ ಇಂದು ಯಾವುದೇ ಸದ್ದುಗದ್ದಲ ಇಲ್ಲದೆ ನಾಮಪತ್ರ ಸಲ್ಲಿಸಿದ್ದು ಅಚ್ಚರಿಯನ್ನುಂಟು ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!