ದಿಗಂತ ವರದಿ ವಿಜಯಪುರ:
ವಿದ್ಯುತ್ ತಂತಿ ಸ್ಪರ್ಶಿಸಿ 17 ಕುರಿಗಳು ಸಾವಿಗೀಡಾದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಡಂಬಳ ತಾಂಡಾದ ತೋಟದಲ್ಲಿ ನಡೆದಿದೆ.
ಇಲ್ಲಿನ ಕಾಂತವ್ವ ರಾಠೋಡ ಎಂಬುವರಿಗೆ ಸೇರಿದ ಕುರಿಗಳು ಸಾವಿಗೀಡಾಗಿದ್ದು, ಸ್ಥಳಕ್ಕೆ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.