ಘರ್ ಘರ್ ಗ್ಯಾರಂಟಿ: ಕಾಂಗ್ರೆಸ್‌ನ ಅಭಿಯಾನಕ್ಕೆ ದಿಲ್ಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್‌ನ ’ಘರ್ ಘರ್ ಗ್ಯಾರಂಟಿ’ ಅಭಿಯಾನಕ್ಕೆ ಈಶಾನ್ಯ ದಿಲ್ಲಿ ಲೋಕಸಭಾ ಕ್ಷೇತ್ರದ ಕೈಥವಾಡ ಉಸ್ಮಾನ್ಪುರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದ್ದಾರೆ.

ಈ ಸಂದರ್ಭ ಮಾತನಾಡಿದ ಅವರು, ದೇಶದಾದ್ಯಂತ ಎಂಟು ಕೋಟಿ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸುವ ಯೋಜನೆ ಇದಾಗಿದೆ, ನಾವು ನೀಡಿದ ಭರವಸೆಗಳನ್ನೆಲ್ಲ ಈಡೇರಿಸಲಿದ್ದೇವೆ ಎಂದು ಜನರಿಗೆ ತಿಳಿಸಲಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್‌ನ ಎಲ್ಲಾ ನಾಯಕರು, ಕಾರ್ಯಕರ್ತರು ಈ ಕಾರ್ಡನ್ನು ಮನೆ ಮನೆಗಳಿಗೆ ತೆರಳಿ ವಿತರಣೆ ಮಾಡಲಿದ್ದಾರೆ. ಮೈತ್ರಿ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಜಾರಿ ಮಾಡಲಿರುವ ಯೋಜನೆಗಳ ಬಗ್ಗೆ ಮನವರಿಕೆ ಮಾಡಲಿದ್ದಾರೆ ಎಂದು ಅವರು ಹೇಳಿದರು. ಇದೇ ಸಂದರ್ಭ ಬಿಜೆಪಿಯ ‘ಮೋದಿ ಗ್ಯಾರಂಟಿ’ ಬಗ್ಗೆಯೂ ಆವರು ಟೀಕಾ ಪ್ರಹಾರ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!