ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು `ಬಿಲ್ಲವ ಸಂದೇಶ್’ ಎನ್ನುವ ಫೇಸ್ಬುಕ್ ಖಾತೆಯಲ್ಲಿ ತೀರಾ ಅವಮಾನಕರವಾಗಿ ಬರೆದು ಶ್ರದ್ಧಾಂಜಲಿ ಸಲ್ಲಿಸಿರುವುದನ್ನು ಅತ್ಯಂತ ಕಠಿಣ ಶಬ್ದಗಳಲ್ಲಿ ಸುಳ್ಯ ಮಂಡಲ ಬಿಜೆಪಿ ತೀವ್ರವಾಗಿ ಖಂಡಿಸಿದೆ.
ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಅತ್ಯಂತ ಕಡು ಬಡ ಕುಟುಂಬದಿಂದ ಬಂದವರಾಗಿದ್ದು, ತಮ್ಮ ಸಂಘಟನಾ ಬದ್ಧತೆ ಹಾಗೂ ಕ್ರಿಯಾಶೀಲತೆಯಿಂದ ತಾಲೂಕು ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿ ಜನಸೇವೆ ಸಲ್ಲಿಸಿ ಇದೀಗ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕರಾಗಿ ಆಯ್ಕೆಯಾದ ದಿನದಿಂದ ನಿರಂತರವಾಗಿ ಕ್ಷೇತ್ರದಲ್ಲಿ ಓಡಾಡುತ್ತ, ವಿರೋಧ ಪಕ್ಷದ ಸದಸ್ಯರಾಗಿದ್ದರೂ, ಸಚಿವರಿಗೆ ಮನವಿ ಸಲ್ಲಿಸಿ, ಬೆನ್ನು ಹಿಡಿದು ಓಡಾಡಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ನಿರಂತರ ಪ್ರಯತ್ನ ಪಡುತ್ತಿದ್ದಾರೆ. ದಲಿತರ ಸಮಸ್ಯೆಗಳಿಗೆ ನಿರಂತರ ಸ್ಪಂದಿಸುತ್ತಿದ್ದು, ಸುಳ್ಯದ ಅಂಬೇಡ್ಕರ್ ಭವನ ಪೂರ್ಣಗೊಳಿಸುವಲ್ಲಿಯೂ ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.
ಹೀಗಿರುವಾಗ ಯಾವುದೊ ವೈಯುಕ್ತಿಕ ತೀಟೆಗೋಸ್ಕರ ದಲಿತ ಶಾಸಕಿಯನ್ನು ಹಾಗೂ ಬಿಜೆಪಿಯನ್ನು ಅವಮಾನಿಸುವ ಹೀನ ಮನೋ ಪ್ರವೃತ್ತಿಯಿಂದ ಸಾಮಾಜಿಕ ಜಾಲತಾಣದಲ್ಲಿ ಹೀಯಾಳಿಸುವ ಕೆಲಸವನ್ನು ಮಾಡಲಾಗುತ್ತಿದೆ. ದ.ಕ. ಜಿಲ್ಲೆಯ ಪೆÇಲೀಸ್ ಮುಖ್ಯಸ್ತಿಳಿಸಿದ್ದಾರೆ. ಕೂಡಲೇ ಕ್ರಮ ವಹಿಸಿ, ಸದ್ರಿ ವ್ಯಕ್ತಿಯ ಮೇಲೆ ಸುಮೊಟೋ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಿ ಜೈಲಿಗಟ್ಟುವ ಕೆಲಸ ಮಾಡಬೇಕು ಎಂದು ಮಂಡಲ ಬಿಜೆಪಿ ಅಗ್ರಹಿಸಿದೆ.
ಇಂತಹ ರೋಗಗ್ರಸ್ತ ಮಾನಸಿಕತೆಯ ವ್ಯಕ್ತಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಬಿಜೆಪಿ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ ತಿಳಿಸಿದ್ದಾರೆ.

