ಹೊಸದಿಗಂತ ಮಂಗಳೂರು:
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ. ಜಯಪ್ರಕಾಶ್ ಹೆಗ್ಡೆ ಅಧಿಕೃತವಾಗಿ ಕಣಕ್ಕಿಳಿದಿದ್ದು, ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸುವ ವೇಳೆ ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಡಾ. ಅಂಶುಮಂತ್ ಗೌಡ, ಇಂಧನ ಸಚಿವ, ಚಿಕ್ಕಮಗಳೂರು ಕಾಂಗ್ರೆಸ್ ಅಧ್ಯಕ್ಷ ಕೆ.ಜೆ. ಜಾರ್ಜ್ ಮತ್ತಿತರರು ಜೊತೆಗಿದ್ದರು.
ಇದಕ್ಕೂ ಮುನ್ನ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ, ಇಂಧನ ಸಚಿವ ಕೆ.ಜೆ. ಜಾರ್ಜ್,ಕಾಂಗ್ರೆಸ್ ಮುಖಂಡರಾದ ಗೋಪಾಲ ಪೂಜಾರಿ, ಪ್ರಸಾದ್ ರಾಜ್ ಕಾಂಚನ್, ಗಾಯತ್ರಿ ಶಾಂತೇಗೌಡರ್, ಸಂದೀಪ್, ಎಐಸಿಸಿ ಕಾರ್ಯದರ್ಶಿ ಶಿವಾನಂದ ಸ್ವಾಮಿ, ಗುರುನಾಟಿ ಸಮಿತಿ ಅಧ್ಯಕ್ಷ ಬಿ.ಎಚ್.ಹರೀಶ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ಕಾರ್ಯಾಧ್ಯಕ್ಷ ಬಿ.ಎಂ.ಸುಕುಮಾರ್ ಶೆಟ್ಟಿ, ಉದಯ ಶೆಟ್ಟಿ ಮುನಿಯಾಲು, ರಮೇಶ್ ಕಾಂಚನ್, ದಿನಕರ್ ಹೇರೂರು, ಶಾಸಕರಾದ ರಾಜೇಗೌಡ, ಜಿ.ಎಚ್.ಶ್ರೀನಿವಾಸ್, ನಯನಾ ಮೋಟಮ್ಮ ಮತ್ತಿತರರು ಇದ್ದರು.