ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದೇ ವೇದಿಕೆಗೆ ಚರ್ಚೆಗೆ ಬರುವಂತೆ ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಮಿತ್ ಶಾ ಅವರು ಒಂದೇ ವೇದಿಕೆಗೆ ಚರ್ಚೆಗೆ ಬರಲಿ, ಯಾರು ಸತ್ಯ ಹೇಳುತ್ತಿದ್ದಾರೆ ಮತ್ತು ಯಾರು ಸುಳ್ಳು ಹೇಳುತ್ತಿದ್ದಾರೆ ಎಂಬುದು ಆಗ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರು ಸತ್ಯವನ್ನು ಮರೆಮಾಚುತ್ತಾ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನು ಸೂಕ್ತ ದಾಖಲೆಗಳೊಂದಿಗೆ ಬಿಡುಗಡೆ ಮಾಡಲು ನಾನು ಸಿದ್ಧನಿದ್ದೇನೆ. ಕೇಂದ್ರದ ಈ ನಿಲುವನ್ನು ಪ್ರಶ್ನಿಸಿ ನಾವು ನ್ಯಾಯಾಲಯದ ಮೊರೆ ಹೋಗಿದ್ದೆವು. 15 ನೇ ಹಣಕಾಸು ಆಯೋಗದ ಪ್ರಕಾರ, ದೇಶದ ವಿವಿಧ ಭಾಗಗಳಲ್ಲಿ ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಪರಿಹಾರ ನೀಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯನ್ನು ಕೇಂದ್ರಕ್ಕೆ ನೀಡಲಾಗಿದೆ. NDRF ನಿಧಿಗಳು ರಾಜ್ಯಗಳಿಗೆ ಸೇರಿವೆ. ರಾಜ್ಯದ ಜನತೆ ಬರದಿಂದ ಕಂಗೆಟ್ಟಿದ್ದರೂ ಉದಾಸೀನ ಮಾಡುತ್ತಿರುವ ಬಿಜೆಪಿ ಕೇಂದ್ರ ಸರಕಾರಕ್ಕೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.