ಲಕ್ನೋದಲ್ಲಿ ಭೀಕರ ಅಪಘಾತ: 4 ವರ್ಷದ ಮಗು ಮೇಲೆ ಹರಿದ ಕಾರು, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಲಕ್ನೋದಲ್ಲಿ ನಾಲ್ಕು ವರ್ಷದ ಮಗು ಮೇಲೆ ಕಾರು ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಆಘಾತಕಾರಿ ಘಟನೆ ನಡೆದಿದೆ.

ಈ ಭಯಾನಕ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸ್ಥಳದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಭೀಕರ ಘಟನೆಯ ದೃಶ್ಯ ಸೆರೆಯಾಗಿದೆ.

ಮಗು ರಸ್ತೆಯಲ್ಲಿ ಓಡಾಡುತ್ತಿದ್ದಾಗ ಮಹೀಂದ್ರಾ XUV700 ಕಾರು ಮಗು ಮೇಲೆ ಹರಿದಿದ್ದು, ಮಗು ತಕ್ಷಣವೇ ಸಾವನ್ನಪ್ಪಿದೆ. @SachinGuptaUP ಎಂಬ ಟ್ವಿಟರ್​​ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು. ಕೇವಲ ಒಂದು ಗಂಟೆಯಲ್ಲಿ 2ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!