ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆ.ಎಸ್. ಈಶ್ವರಪ್ಪ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಲು ಹೋಗಿದ್ರು, ಯಾಕೆ ಭೇಟಿಯಾಗಲಿಲ್ಲ ಎಂಬುದು ಗೊತ್ತಾಗಿಲ್ಲ. ಈಶ್ವರಪ್ಪ ಅವರ ಹೇಳಿಕೆಯನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕು. ಪಕ್ಷಕ್ಕೆ ಮುಜುಗರವಾಗದ ರೀತಿಯಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಇಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲಾ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ. ಇದರಿಂದ ಅಸಮಾಧಾನಗೊಂಡವರು ವೈಯಕ್ತಿಕ ಸಮಸ್ಯೆಗಳನ್ನು ಬಿಟ್ಟು ಮೋದಿಯವರ ಹಾಗೂ ದೇಶದ ವಿಚಾರದಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಆಗ್ರಹಿಸಿದರು.
ನಾನು ವಿರೋಧ ಪಕ್ಷದ ನಾಯಕನಾಗುವ ಎಲ್ಲಾ ಅರ್ಹತೆ ಇತ್ತು. ಆದರೆ, ನನ್ನನ್ನು ನಾಯಕನಾಗಿ ಮಾಡಲಿಲ್ಲ, ನನಗೆ ಆ ಬಗ್ಗೆ ಅಸಮಧಾನ ಇಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
First yatnal avru sari ಆಗಬೇಕಿದೆ