ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಈಗಾಗಲೇ ಬಿಜೆಪಿ ಸೇರಲು ನಿರ್ಧರಿಸಿರುವ ಬಗ್ಗೆ ಗೊತ್ತೇ ಇದೆ. ಆದರೆ ಸುಮಲತಾ ಅಂಬರೀಶ್ ಅವರು ಅಧಿಕೃತವಾಗಿ ಬಿಜೆಪಿ ಸೇರಲು ಮುಹೂರ್ತ ನಿಗದಿಯಾಗಿದೆ.
ಹೌದು, ನಾಳೆ ಏಪ್ರಿಲ್ 5 ರಂದು ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ನಡೆಯುವ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮುಖದಲ್ಲಿ ಬಿಜೆಪಿ ಸೇರಲು ಮುಂದಾಗಿದ್ದಾರೆ.
ಇನ್ನು ಇದೇ ವೇಳೆ ಸುಮಲತಾ ಅಂಬರೀಶ್ ಬೆಂಬಲಿಗರೂ ಕೂಡ ಬಿಜೆಪಿ ಸೇರಲು ಬಯಸಿದ್ದಾರೆ ಎನ್ನಲಾಗಿದೆ. ನಾಳೆ (ಶುಕ್ರವಾರ) ಬೆಳಗ್ಗೆ 11:30ಕ್ಕೆ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.