ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಡು ಬಿಸಿಲಿನ ತಾಪ ಹೆಚ್ಚುತ್ತಿದೆ. ಹವಾಮಾನ ಬದಲಾವಣೆಯು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತಿದೆ. ಇದರಿಂದ ಮಕ್ಕಳ ಆರೋಗ್ಯದಲ್ಲೂ ತೊಂದರೆಯಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಆಂಧ್ರಪ್ರದೇಶ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ನೀರು ಕುಡಿಯಲು ಮೂರು ಬಾರಿ ಬಿಡುವು ನೀಡಲು ನಿರ್ಧರಿಸಿದೆ.
ತಾಪಮಾನ ಏರಿಕೆಯಿಂದಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಈ ನಿರ್ಧಾರವನ್ನು ಕಡ್ಡಾಯಗೊಳಿಸಲಾಗಿದೆ. ಮಕ್ಕಳಿಗೆ ಮೂರು ನೀರಿನ ವಿರಾಮಗಳನ್ನು ಘೋಷಿಸಲಾಗಿದೆ. ಆದ್ದರಿಂದ ಬೆಳಿಗ್ಗೆ 9:45, 10:05 ಮತ್ತು 11:50ಕ್ಕೆ ವಿರಾಮಗಳನ್ನು ಕಡ್ಡಾಯವಾಗಿ ನೀಡಲು ಸೂಚಿಸಿದೆ.
ಇನ್ನು ಮಕ್ಕಳಿಗೆ ಉರಿ ಬಿಸಿಲಿನಿಂದ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ‘ವಾಟರ್ ಬೆಲ್’ ಎಂಬ ಕಡ್ಡಾಯ ನಿಯಮ ಜಾರಿಗೆ ತಂದಿದೆ.