ಎನ್‌ಸಿಗೆ ಟಕ್ಕರ್: ಕಾಶ್ಮೀರದ ಎಲ್ಲಾ ಮೂರು ಲೋಕಸಭಾ ಕ್ಷೇತ್ರಗಳಲ್ಲಿಯೂ ಪಿಡಿಪಿ ಸ್ಪರ್ಧೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿಯ ಚುನಾವಣೆಯಲ್ಲಿ I.N.D.I.A ಕೂಟದಲ್ಲಿರುವ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ ಕಾಶ್ಮೀರದ ಎಲ್ಲಾ ಮೂರು ಲೋಕಸಭಾ ಕ್ಷೇತ್ರಗಳಲ್ಲಿಯೂ ಕಣಕ್ಕಿಳಿಯಲಿದೆ ಎಂದು ಘೋಷಿಸಿದೆ.

ಎನ್‌ಸಿ ವರಿಷ್ಠ ಫಾರೂಕ್ ಅಬ್ದುಲ್ಲಾ ಯಾವುದೇ ಆಯ್ಕೆ ಬಿಡದೇ ಇರುವುದರಿಂದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ ಕಾಶ್ಮೀರದ ಎಲ್ಲಾ ಮೂರು ಲೋಕಸಭಾ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದಾಗಿ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಅವರು ನಮ್ಮ ಹಿರಿಯ ನಾಯಕರಾಗಿದ್ದರಿಂದ ಸ್ಥಾನ ಹಂಚಿಕೆಯ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ಮುಂಬೈನಲ್ಲಿ ನಡೆದ ’I.N.D.I.A’ ಕೂಟದ ಸಭೆಯಲ್ಲಿ ಸೂಚಿಸಿದ್ದೆ. ಪಕ್ಷದ ಹಿತಾಸಕ್ತಿ ಬದಿಗಿಟ್ಟು ಅವರು ನ್ಯಾಯ ಸಲ್ಲಿಸುತ್ತಾರೆ ಎಂದೂ ಭಾವಿಸಿದ್ದೆ. ಆದರೆ, ಕಾಶ್ಮೀರದ ಮೂರು ಸ್ಥಾನಗಳಲ್ಲಿಯೂ ಸ್ಪರ್ಧಿಸುವ ಏಕಪಕ್ಷೀಯ ನಿರ್ಧಾರವನ್ನು ಅವರು ಕೈಗೊಂಡಿದ್ದಾರೆ.

ಪಿಡಿಪಿಗೆ ಜನಬೆಂಬಲವಿಲ್ಲ, ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದು ಒಮರ್ ಹೇಳುವ ಮೂಲಕ ನಮಗೆ ಅವಮಾನ ಮಾಡಿದ್ದಾರೆ ಎಂದು ಮೆಹಬೂಬಾ ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!