KRS ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ

ಹೊಸದಿಗಂತ ಮಂಡ್ಯ:

ಬರದಿಂದ ತತ್ತರಿಸಿರುವ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಕೃಷ್ಣರಾಜಸಾಗರ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿ ಕೆರೆ ಕಟ್ಟೆಗಳನ್ನು ತುಂಬಿಸುವಂತೆ ಒತ್ತಾಯಿಸಿ ತಾಲೂಕಿನ ಮರಿಲಿಂನದೊಡ್ಡಿ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ನಡೆಸಿದರು.

ಗ್ರಾಮದ ಬಸ್ ನಿಲ್ದಾಣದ ಬಳಿ ಮರಿಲಿಂಗನದೊಡ್ಡಿ ಸುತ್ತಮುತ್ತಲ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ನಡೆಸಿ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಮಂತ್ರಿ ವಿರುದ್ಧ ಘೋಷಣೆ ಕೂಗಿದರು.

ಮಳೆ ಕೊರತೆಯಿಂದಾಗಿ ನೀರಿನ ಅಭಾವ ಶುರುವಾಗಿದ್ದು, ಜನ-ಜಾನುವಾರುಗಳಿಗೆ ಕುಡಿಯಲು ನೀರು ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ನೀರಿನ ಕೊರತೆ ಇರುವುದರಿಂದ ರೈತರು ಹೊಸ ಬೆಳೆ ಹಾಕಬಾರದು ಎಂದು ಸರ್ಕಾರ ನಿರ್ಬಂಧ ಹಾಕಿದ್ದರಿಂದ ಯಾವುದೇ ಬೆಳೆಯನ್ನು ರೈತರು ಬೆಳೆದಿಲ್ಲ. ಆದರೆ ಇರುವ ಬೆಳೆ ರಕ್ಷಣೆ ಮತ್ತು ಜನ-ಜಾನುವಾರುಗಳ ಕುಡಿಯುವ ನೀರಿಗೆ ಆಧ್ಯತೆ ನೀಡಬೇಕಾದದ್ದು ಸರ್ಕಾರದ ಕರ್ತವ್ಯವಾಗಿದೆ ಎಂದು ದೂರಿದರು.

ಕಳೆದ ಬಾರಿ ಭೀಕರ ಬರ ಬಂದ ಸಂದರ್ಭದಲ್ಲೂ ಕೆಆರ್‌ಎಸ್‌ನಲ್ಲಿ 70 ಅಡಿ ನೀರಿದ್ದರೂ, ನಾಲೆಗಳಲ್ಲಿ ನೀರು ಹರಿಸುವ ಮೂಲಕ ಜನ-ಜಾನುವಾರುಗಳನ್ನು ರಕ್ಷಿಸುವ ಕೆಲಸ ಮಾಡಿದ್ದರು. ಆದರೆ ಕನ್ನಂಬಾಡಿ ಜಲಾಶಯದಲ್ಲಿ 84 ಅಡಿ ನೀರಿದ್ದರೂ ನಾಲೆಯಲ್ಲಿ ನೀರು ಹರಿಸದೆ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!