ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದೊಂದು ತಿಂಗಳಿಂದ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಸಂತಸದ ಸುದ್ದಿಯೊಂದು ಬಂದಿದೆ. ಶೀಘ್ರದಲ್ಲೇ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಯುಗಾದಿ ನಂತರ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಏಪ್ರಿಲ್ 13 ಮತ್ತು 14ರ ನಂತರ ಬೆಂಗಳೂರು ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ.
ಹೀಗಾಗಿ ಬೇಸಿಗೆಯ ಬಿಸಿಲಿನಿಂದ ಹೈರಾಣಾಗಿದ್ದ ಜನರು ಸದ್ಯದಲ್ಲೇ ಮಳೆಯ ಸಿಂಚನದಿಂದ ಸಂತಸ ಪಡಲಿದ್ದಾರೆ.
ಕೊಡಗು, ಚಿಕ್ಕಮಗಳೂರು, ಮೈಸೂರು, ಧಾರವಾಡ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ಬೀದರ್, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಏಪ್ರಿಲ್ ನಲ್ಲಿ ಈ ಭಾಗದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ.