ಹೊಸದಿಗಂತ ಡಿಜಿಟಲ್ ಡೆಸ್ಕ್:
ಸತತ ಸೋಲುಗಳಿಂದ ಆಘಾತಕ್ಕೊಳಗಾದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ದೇವರ ಮೊರೆ ಹೋಗಿದ್ದಾರೆ. ಇಂದು ಹಾರ್ದಿಕ್ ಪಾಂಡ್ಯ ಗುಜರಾತ್ನ ಪ್ರಭಾಸ್ ಪಟಾನ್ನಲ್ಲಿರುವ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಪಾಂಡ್ಯ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೋವನ್ನು ಸೋಮನಾಥ ದೇವಸ್ಥಾನ ಟ್ರಸ್ಟ್ ಹಂಚಿಕೊಂಡಿದೆ. ಏಪ್ರಿಲ್ 1 ರಂದು ಮುಂಬೈ ಇಂಡಿಯನ್ಸ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಹೀನಾಯ ಸೋಲು ಅನುಭವಿಸಿತ್ತು. ಮುಂದಿನ ಪಂದ್ಯಕ್ಕೆ ಇನ್ನೂ ಸಾಕಷ್ಟು ಸಮಯವಿದ್ದು, ಮುಂಬೈ ತಂಡ ಇದೀಗ ಮೋಜು ಮಸ್ತಿಯಲ್ಲಿದೆ.
ಇದೇ ವೇಳೆ ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಏಕಾಂಗಿಯಾಗಿ ದೇವಸ್ಥಾನಕ್ಕೆ ಭೇಟಿ ನೀಡಿ ತಂಡದ ಗೆಲುವಿಗಾಗಿ ದೇವರಲ್ಲಿ ಪ್ರಾರ್ಥಿಸಿದ್ದಾರೆ.
#WATCH | Gujarat: Indian Cricket Team all-rounder Hardik Pandya offers prayers at Somnath Temple.
Source: Somnath Temple Trust pic.twitter.com/F8n05Q1LSA
— ANI (@ANI) April 5, 2024