ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ತಡರಾತ್ರಿ ಚುನಾವಣಾ ಚೆಕ್ ಪೋಸ್ಟ್‌ಗೆ ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.
ಮಂಡ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿಯೊಂದು ಚೆಕ್ ಪೋಸ್ಟ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್ ಕರ್ತವ್ಯದಲ್ಲಿದ್ದ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾಲಕ ಕುಡಿದ ಅಮಲಿನಲ್ಲಿ ಟ್ರಕ್ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.