ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಣಿವೆಗೆ ಖಾಸಗಿ ಬಸ್ ಪಲ್ಟಿಯಾಗಿ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಹತ್ತು ಮಂದಿ ಗಾಯಗೊಂಡಿರುವ ಭೀಕರ ಘಟನೆ ಇಂದು ಬೆಳಗ್ಗೆ ಚಿತ್ರದುರ್ಗ ಜೆಲ್ಲೆಯ ಹೊಳಲ್ಕೆರೆ ತಾಲೂಕಿನ ಹೊಳಲ್ಕೆರೆ ಪಟ್ಟಣದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ವೇಗವಾಗಿ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಕಣಿವೆಗೆ ಡಿಕ್ಕಿ ಹೊಡೆದಿದೆ. ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಾಳುಗಳಿಗೆ ಹೊಳಲ್ಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು. ಪಿಎಸ್ ಐ ಸುರೇಶ್ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬಸ್ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿತ್ತು. ಬಸ್ಸಿನಲ್ಲಿ 38 ಮಂದಿ ಪ್ರಯಾಣಿಕರಿದ್ದರು. ಬಸ್ ಚಾಲಕ ನಿದ್ದೆ ಮಂಪರಿನಲ್ಲಿ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ತಿಳಿಸಿದ್ದಾರೆ. ಗಾಯಾಳುಗಳನ್ನು ಹೊಳಲ್ಕೆರೆ ಮಾತ್ರವಲ್ಲದೆ ಚಿತ್ರದುರ್ಗ, ಶಿವಮೊಗ್ಗ ಆಸ್ಪತ್ರೆಗಳಿಗೂ ಕರೆದೊಯ್ಯಲಾಗಿದೆ.