ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ , ಡಿಕೆಶಿ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ನಿನ್ನೆ ಕೋಲಾರದ ಕುರುಡುಮಲೆಯ ಗಣಪನ ಸನ್ನಿಧಿಯಲ್ಲಿ ಅಧಿಕೃತವಾಗಿ ಪ್ರಚಾರಕ್ಕೆ ಚಾಲನೆ ನೀಡಲಾಗಿದ್ದು, ಇಂದು ಸಿಲಿಕಾನ್ ಸಿಟಿಯಲ್ಲಿ ಮತಬೇಟೆ ನಡೆಯುತ್ತಿದೆ.
ಸಿಎಂ ಮತ ಬೇಟೆಗೆ ಡಿಸಿಎಂ ಸೇರಿದಂತೆ ಹಲವು ಸಚಿವರು ಬೆಂಬಲ ನೀಡಲಿದ್ದಾರೆ. ಕಾಂಗ್ರೆಸ್ ಕಲಿಗಳು ಇಂದಿನಿಂದ ಬೆಂಗಳೂರಿನ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಿದ್ದಾರೆ.
ಕೋಲಾರ ಕ್ಷೇತ್ರದ ನಂತರ ಕಾಂಗ್ರೆಸ್ ನಾಯಕರು ಬೆಂಗಳೂರಿನತ್ತ ದೃಷ್ಟಿ ನೆಟ್ಟಿದ್ದಾರೆ. ಇಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸಿಎಂ ಮತ್ತು ಡಿಸಿಎಂ ಪ್ರಚಾರ ನಡೆಸಲಿದ್ದಾರೆ.
ದಾಸರಹಳ್ಳಿ , ಬ್ಯಾಟರಾಯನಪುರ, ಮಲ್ಲೇಶ್ವರ, ಪದ್ಮನಾಭ ನಗರ, ಮಹಾಲಕ್ಷ್ಮಿ ಲೇಔಟ್, ಬೊಮ್ಮನಹಳ್ಳಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 11ರಿಂದ 2ರವರೆಗೆ ದಕ್ಷಿಣ ಬೆಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಕೇಂದ್ರದಲ್ಲಿ ಮಧ್ಯಾಹ್ನ 3:00 ರಿಂದ ರಾತ್ರಿ 9:00 ರವರೆಗೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.