ಕೇಜ್ರಿವಾಲ್ ಬಂಧನ ವಿರೋಧಿಸಿ ಜಂತರ್ ಮಂತರ್‌ನಲ್ಲಿ ಎಎಪಿ ಕಾರ್ಯಕರ್ತರ ಉಪವಾಸ ಸತ್ಯಾಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಮತ್ತು ಕಾರ್ಯಕರ್ತರು ಇಂದು ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ದೇಶಾದ್ಯಂತ ಮತ್ತು ವಿಶ್ವದಾದ್ಯಂತ ಕೇಜ್ರಿವಾಲ್ ಬೆಂಬಲಿಗರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಕಾರ್ಯಕರ್ತರು ತಿಳಿಸಿದ್ದಾರೆ.

ಉಪವಾಸ ಬೆಳಗ್ಗೆ 11ರಿಂದ ಸಂಜೆ 5ರವರೆಗೆ ನಡೆಯಲಿದೆ. ದೆಹಲಿ ಸರ್ಕಾರದ ಸಚಿವ ಗೋಪಾಲ್ ರೈ, ಆಮ್ ಆದ್ಮಿ ಪಕ್ಷದ ಶಾಸಕರು, ಸಚಿವರು, ಸಂಸದರು ಮತ್ತು ಕೌನ್ಸಿಲರ್‌ಗಳು ದೆಹಲಿಯ ಜಂತರ್ ಮಂತರ್ ಮತ್ತು ಪಂಜಾಬ್‌ನ ಶಾಹೀದ್ ಭಗತ್ ಸಿಂಗ್ ಅವರ ಹಳ್ಳಿಯಾದ ಖತ್ಖರ್ಕಲನ್‌ನಲ್ಲಿ ಸಾಮೂಹಿಕ ಉಪವಾಸವನ್ನು ನಡೆಸಲಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶ, ಹರಿಯಾಣ, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರಪ್ರದೇಶ ಮತ್ತು ತಮಿಳುನಾಡು ಸೇರಿದಂತೆ ದೇಶದ 25 ರಾಜ್ಯಗಳ ರಾಜಧಾನಿಗಳು, ಜಿಲ್ಲೆ/ಬ್ಲಾಕ್ ಕೇಂದ್ರಗಳು, ಹಳ್ಳಿಗಳು ಮತ್ತು ನಗರಗಳಲ್ಲಿ ಜನರು ಸಾಮೂಹಿಕ ಉಪವಾಸ ಮಾಡಲಿದ್ದಾರೆ ಎಂದು ಕಾರ್ಯಕರ್ತರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!