ಹೊಸದಿಗಂತ ಡಿಜಿಟಲ್ ಡೆಸ್ಕ್:
ಸತತ ಮೂರು ಸೋಲಿನಿಂದ ಕಂಗೆಟ್ಟಿದ್ದ ಮುಂಬೈ ಇಂಡಿಯನ್ಸ್ ಕೊನೆಗೂ ಗೆಲುವಿನ ದಡ ಸೇರಿದೆ. ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ರೋಚಕ ಗೆಲುವು ಸಾಧಿಸಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಡೆ 29 ರನ್ಗಳಿಂದ ಗೆದ್ದಿದೆ. ಡೆಲ್ಲಿ ಕ್ಯಾಪಿಟಲ್ಸ್ ಮತ್ತೊಂದು ಹೀನಾಯ ಸೋಲು ಕಂಡಿದೆ.
ಮೊದಲು ಬ್ಯಾಟಿಂಗ್ಗೆ ಇಳಿದ ಮುಂಬೈ ಇಂಡಿಯನ್ಸ್ ಆಟಗಾರರು ಉತ್ತಮ ಸ್ಕೋರ್ ಕಲೆ ಹಾಕಿದರು. ಸಂಘಟಿತ ಬ್ಯಾಟಿಂಗ್ ಪ್ರದರ್ಶನದಲ್ಲಿ 5 ವಿಕೆಟ್ ನಷ್ಟಕ್ಕೆ ಮುಂಬೈ ತಂಡ 234 ರನ್ ಗಳಿಸಿತ್ತು. ಈ ಟಾರ್ಗೆಟ್ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ನಲ್ಲಿ ಎಡವಿದ್ದು 205 ರನ್ ಕಲೆ ಹಾಕುವಲ್ಲಿ ಸುಸ್ತಾಗಿ ಹೋಯಿತು. ಉತ್ತಮ ಬ್ಯಾಟಿಂಗ್, ಬೌಲಿಂಗ್ ಪ್ರದರ್ಶನದೊಂದಿಗೆ ಮುಂಬೈ ಇಂಡಿಯನ್ಸ್ 29 ರನ್ಗಳಿಂದ ಪಂದ್ಯ ಗೆಲುವು ಸಾಧಿಸಿದೆ.
ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಈ ಬಾರಿಯ ಐಪಿಎಲ್ ಆರಂಭಿಸಿದ ಮುಂಬೈ ಇಂಡಿಯನ್ಸ್ ಸತತ ಮೂರು ಸೋಲು ಅನುಭವಿಸಿತ್ತು. ಹಾರ್ದಿಕ್ ಪಾಂಡ್ಯ ಕ್ಯಾಪ್ಟೆನ್ಸಿಗೆ ಇದು ಅತಿದೊಡ್ಡ ಸವಾಲಾಗಿತ್ತು. ಇಂದು ಮುಂಬೈನಲ್ಲಿ ಕಣಕ್ಕಿಳಿದ ಪಾಂಡ್ಯ ಪಡೆಗೆ ಆಪತ್ಪಾಂಧವ ರೋಹಿತ್ ಶರ್ಮಾ ಅವರೇ ಆಸರೆಯಾಗಿದ್ದಾರೆ.