ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಇಂದಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಟಾಸ್ ಗೆದ್ದ ಸಿಎಸ್ಕೆ ನಾಯಕ ರುತುರಾಜ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಸತತ ಎರಡು ಸೋಲಿನ ಬಳಿಕ ಋತರಾಜ್ ಗಾಯಕವಾಡ ನೇತೃತ್ವದ ಚೆನ್ನೈ ತಂಡ ಮತ್ತೆ ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸುತ್ತಿದ್ದು, ಇದುವರೆಗೆ ಸೋಲನುಭವಿಸದ ಕೆಕೆಆರ್ ಆವೇಗವನ್ನು ಕಾಯ್ದುಕೊಳ್ಳಲು ಹವಣಿಸುತ್ತಿದೆ.
ಸಿಎಸ್ಕೆ ತಂಡ ಆಡಿದ 4 ಪಂದ್ಯಗಳಲ್ಲಿ 2 ಗೆಲುವು ಹಾಗೂ 2 ಸೋಲು ಕಂಡಿದೆ. ಐಪಿಎಲ್ 2024ರ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಇಳಿದಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಆಡಿದ 3 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿ ಐಪಿಎಲ್ 2024ರ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.