ಶತಮಾನಗಳಲ್ಲೇ ಸಂಪೂರ್ಣ ಸೂರ್ಯಗ್ರಹಣ ಗೋಚರ: ವಿಡಿಯೋ ಬಿಡುಗಡೆ ಮಾಡಿದ ನಾಸಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವರ್ಷದ ಮೊದಲ ಸೂರ್ಯಗ್ರಹಣವು ಸೋಮವಾರ ಗೋಚರವಾಗಿದೆ. ಮೆಕ್ಸಿಕೊ, ಕೆನಡಾ ಹಾಗೂ ಅಮೆರಿಕದಂತಹ ದೇಶಗಳಲ್ಲಿ ಸೂರ್ಯಗ್ರಹಣ ಗೋಚರವಾಗಿದೆ.

ಅಲ್ಲದೇ ನ್ಯೂಯಾರ್ಕ್‌ನಲ್ಲಿ  ಶತಮಾನಗಳ ಬಳಿಕ ಮೊದಲಬಾರಿಗೆ ಸಂಪೂರ್ಣವಾಗಿ ಗೋಚರವಾಗಿರುವ ಸೂರ್ಯಗ್ರಹಣವಿದು ಎಂದು ಹೇಳಲಾಗಿದೆ. ನಾಸಾ ಈ ಬಗೆಗಿನ ವಿಡಿಯೋ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ನಾಸಾ ತನ್ನ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದೆ. ಸಂಪೂರ್ಣತೆಯ ಹಾದಿಯಾಗಿ ಚಂದ್ರನು ಸೂರ್ಯನನ್ನು ಸಂಪೂರ್ಣವಾಗಿ ಮರೆಮಾಚುವ ದೃಶ್ಯಗಳು ಈ ಚಿತ್ರಪಟ ಹಾಗೂ ವೀಡಿಯೋದಲ್ಲಿ ಕಂಡುಬಂದಿದೆ. ಆದರೆ ಇದು ಭಾರತದಲ್ಲಿ ಗೋಚರವಾಗಿಲ್ಲ. ವಿಡಿಯೋ ಮುಖೇನ ಮಾತ್ರ ಸಂಪೂರ್ಣ ಸೂರ್ಯಗ್ರಹಣ ಕಣ್ತುಂಬಿಕೊಳ್ಳಬಹುದಾಗಿದೆ.


ನಾಸಾ ವೀಕ್ಷಕರಿಗಾಗಿ ತನ್ನ ಸೋಶಿಯಲ್‌ ಮೀಡಿಯಾ ವೇದಿಕೆಗಳಲ್ಲಿ ಅಧಿಕೃತ ನೇರ ಪ್ರಸಾರ ಸಹ ಹಮ್ಮಿಕೊಂಡಿತ್ತು. ಈ ಕುರಿತ ವೀಡಿಯೋಗಳನ್ನು ಈಗ ಹಂಚಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!