ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಹೆಗ್ಗನಹಳ್ಳಿ ಮುಖ್ಯರಸ್ತೆಯಲ್ಲಿ ತಡರಾತ್ರಿ ಬೈಕ್ ಗೆ ಟಾಟಾ ಏಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮಹಮ್ಮದ್ ಫಾರೂಖ್, ಅಬ್ರಾರ್ ಅಹ್ಮದ್ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳು. ಮತ್ತೊಬ್ಬ ಯುವಕ ಮಹಮ್ಮದ್ ಸಿದ್ದಿಕ್ ಗಂಭೀರವಾಗಿ ಗಾಯಗೊಂಡಿದ್ದಾನೆ.
ಹೆಗ್ಗನಹಳ್ಳಿ ಬಳಿ ಯುವಕರು ಬೈಕ್ ನಿಲ್ಲಿಸಿ ನಿಂತಿದ್ದರು. ಆಗ ಟಾಟಾ ಏಸ್ ನಿಲ್ಲಿಸಿದ್ದ ಬೈಕ್ ಗೆ ಅತಿವೇಗದಲ್ಲಿ ಬಂದು ಡಿಕ್ಕಿ ಹೊಡೆದು ಮುಂದೆ ನಿಂತಿದ್ದ ಯುವಕರಿಗೆ ಡಿಕ್ಕಿ ಹೊಡೆದಿದೆ.
ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ನಂತರ ಟಾಟಾ ಏಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಮೃತರ ಕುಟುಂಬಸ್ಥರು ಪೀಣ್ಯಾ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.