ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ. 81.15ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಅಲ್ಲದೇ ಪ್ರತೀ ಬಾರಿಯಂತೆ ಈ ಬಾರಿಯೂ ಕೂಡ ಬಾಲಕಿಯರದ್ದೇ ಮೇಲುಗೈ ಆಗಿದೆ.
ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಗಳಿಸಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದಿದ್ದಾರೆ.
ಇನ್ನು ಕಲಾ ವಿಭಾಗದಲ್ಲಿಇಬ್ಬರು ಟಾಪರ್ಗಳಾಗಿದ್ದಾರೆ. ಮೇಧಾ ಡಿ. 600ಕ್ಕೆ 596 ಅಂಕಗಳನ್ನು ಗಳಿಸಿದ್ದಾರೆ, ಇನ್ನು ವಿಜಯಪುರದ ವೇದಾಂತ್ ಕೂಡ 600ಕ್ಕೆ 596 ಅಂಕಗಳನ್ನು ಗಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 600 ಕ್ಕೆ 597ಅಂಕಗಳನ್ನು ಪಡೆದು ಮೊದಲ ಸ್ಥಾನದಲ್ಲಿದ್ದಾರೆ.