ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಳು ಬಾವಿಗೆ ಬಿದ್ದಿದ್ದ ಬೆಕ್ಕನ್ನು ಕಾಪಾಡಲು ಹೋಗಿ ಐವರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ನೇವಸಾ ತಾಲ್ಲೂಕಿನ ವಾಕಡಿ ಎಂಬ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಾಣಿಕ್ ಕಾಳೆ (65), ಸಂದೀಪ್ ಕಾಳೆ (36), ಅನಿಲ್ ಕಾಳೆ (53), ಬಾಬುಲ್ ಕಾಳೆ (28), ಬಾಬಾಸಾಹೇಬ್ (36) ಎಂದು ಗುರುತಿಸಲಾಗಿದೆ.
ವಾಕಡಿ ಗ್ರಾಮದ ಕಾಳೆ ಎನ್ನುವವರ ಕುಟುಂಬದ ಹಿತ್ತಲಿನಲ್ಲಿದ್ದ ಬಾವಿಗೆಬೆಕ್ಕೊಂದು ಬಿದ್ದು ಸಾವು ಬದುಕಿನ ಮಧ್ಯ ಹೋರಾಡುತ್ತಿತ್ತು. ಬೆಕ್ಕನ್ನು ನೋಡಿದ್ದ ಯುವಕ ಬಾಬುಲ್ ಕಾಳೆ ನೇರವಾಗಿ ಗುಂಡಿಗೆ ಜಿಗಿದು ಅದರ ಪ್ರಾಣ ಉಳಿಸಲು ನೋಡಿದ್ದಾನೆ. ಆದರೆ, ಆತ ಹೊರಬರಲಾರದ್ದನ್ನು ನೋಡಿದ ಇತರ ಆರು ಜನ ಗುಂಡಿಗಿಳಿದು ಬಾಬುಲ್ನ ಪ್ರಾಣ ಕಾಪಾಡಲು ಮುಂದಾಗಿದ್ದಾರೆ.
ಆದರೆ, ಬಯೋಗ್ಯಾಸ್ ಗುಂಡಿಯಲ್ಲಿನ ವಿಷಾನಿಲದಿಂದ (ಮಿಥೇನ್) ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಒಬ್ಬ ಮಾತ್ರ ಬದುಕಿದ್ದಾನೆ.