ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಪರವಾಗಿ ಕ್ಯಾಂಪೇನ್ ಮಾಡಿದ್ದ ಜೆಡಿಎಸ್ ಸದಸ್ಯನಿಗೆ ಚಾಕುವಿನಿಂದ ಇರಿಯಲಾಗಿದೆ.
ಕುಣಿಕಲ್ ತಾಲೂಕಿನ ಅಂಚೇಪಾಳ್ಯದಲ್ಲಿ ಕಾಂಗ್ರೆಸ್ ಬೆಂಬಲಿಗೆ ಜೆಡಿಎಸ್ ಸದಸ್ಯ ಮಂಜುನಾಥ್ ಎನ್ನುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ.
ಚಾಕು ಚುಚ್ಚಿದ ತಕ್ಷಣ ಜೀವ ಉಳಿಸಿಕೊಳ್ಳಲು ಮಂಜುನಾಥ್ ಕೆಳಕ್ಕೆ ಬಗ್ಗಿದ್ದು, ತಲೆಗೆ ಚಾಕು ಇರಿದಿದೆ. ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.