ಆಂಧ್ರಪ್ರದೇಶದಲ್ಲಿ ರಥೋತ್ಸವದ ವೇಳೆ ದುರಂತ, 13 ಮಕ್ಕಳಿಗೆ ಕರೆಂಟ್‌ ಶಾಕ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆಂಧ್ರಪ್ರದೇಶದಲ್ಲಿ ಯುಗಾದಿಯ ರಥೋತ್ಸವದ ವೇಳೆ ಹೈ ವೋಲ್ಟೇಜ್‌ ತಂತಿ ತಗುಲಿ 13ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ.

ಮೆರವಣಿಗೆ ಭಾಗವಾದ ರಥವು ಓವರ್ಹೆಡ್ ಹೈವೋಲ್ಟೇಜ್ ವಿದ್ಯುತ್ ತಂತಿಗೆ ತಗುಲಿ ಕನಿಷ್ಠ 13 ಮಕ್ಕಳು ಗಾಯಗೊಂಡಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತೇಕೂರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗಾಯಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಕರ್ನೂಲ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಜೀವಕ್ಕೆ  ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಖಚಿತಪಡಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!