ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಟೈರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದ ಟೈರ್ ವರ್ಕ್ ಶಾಪ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಹೆಬ್ಬಾಳದ ಗುಡ್ಡದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಸದ್ಯ ಈ ಅಗ್ನಿ ಅವಘಡದಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ.