ಹೊಸದಿಗಂತ ಅಂಕೋಲಾ:
ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಮೃತ ಪಟ್ಟು ಇನ್ನೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ವಜ್ರಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.
ಕಾರು ಚಲಾಯಿಸುತ್ತಿದ್ದ ಹೈಕೋರ್ಟ್ ಅಧಿಕಾರಿ ಯಶವಂತ ಪ್ರಭು (52) ಮೃತ ವ್ಯಕ್ತಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆ ಸಾಗುತ್ತಿದ್ದ ಮಾರುತಿ 800 ಕಾರು ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಪಘಾತದ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.