ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಮತ್ತಿಬ್ಬರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದ NIA

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಮತ್ತಿಬ್ಬರು ಶಂಕಿತರನ್ನು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇಬ್ಬರು ಶಂಕಿತರನ್ನು ಎನ್‌ಐಎ ಬಂಧಿಸಿದೆ ಎಂದು ತಿಳಿದುಬಂದಿದೆ. ಈ ಪ್ರಕರಣದಲ್ಲಿ ಎನ್‌ಐಎ ಅಧಿಕಾರಿಗಳು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಮಾಜ್ ಮುನೀರ್ ಕೃತ್ಯ ಬಲವಾಗಿದ್ದು, ಈತ ಈ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದಾನೆ.

ತಲೆಮರೆಸಿಕೊಂಡಿರುವ ಶಂಕಿತರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಎನ್‌ಐಎ ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಶೋಧ ನಡೆಸಿದೆ. ಈಗಾಗಲೇ ಇಬ್ಬರು ಆರೋಪಿಗಳ ಸುಳಿವಿಗಾಗಿ ತಲಾ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!