ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರಿನ ಗುಬ್ಬಿಯ ಕಾರೇಕುರ್ಚಿ ಗ್ರಾಮದಲ್ಲಿ ಮಹಿಳೆಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸೊಸೆಯ ಕಾಟ ತಾಳಲಾರದೆ ಅತ್ತೆ ಭ್ರಮರಾಂಬಿಕೆ (60)ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಸೊಸೆ ಕಾವ್ಯಶ್ರೀ ಪ್ರತ್ಯೇಕವಾಗಿ ಉಳಿಯಲು ಬಯಸಿದ್ದಳು. ಇದೇ ಕಾರಣಕ್ಕೆ ಅಡುಗೆ ಸೇರಿ ಎಲ್ಲವನ್ನೂ ಪ್ರತ್ಯೇಕವಾಗಿ ಮಾಡಿಕೊಳ್ಳುತ್ತಿದ್ದಳು. ಅಲ್ಲದೆ ಈ ನಡುವೆ ಗಂಡನನ್ನು ಬೆಂಗಳೂರಿಗೆ ಕರೆದೊಯ್ಯುವ ಬಗ್ಗೆಯೂ ಮಾತನಾಡುತ್ತಿದ್ದಳು.
ಹೀಗಾಗಿ ಎಲ್ಲಿ ಮಗನನ್ನ ಸೊಸೆ ತನ್ನಿಂದ ದೂರ ಮಾಡ್ತಾಳೋ ಎನ್ನುವ ಭಯಕ್ಕೆ ಅತ್ತೆ ಭ್ರಮರಾಂಬಿಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ನಿನ್ನೆ ಬೆಳಗ್ಗೆ ಅನುಮಾನಾಸ್ಪದ ಸ್ಥಿತಿಯಲ್ಲಿ ಭ್ರಮರಾಂಬಿಕೆ ಶವ ಫಾರ್ಮ್ಹೌಸ್ನಿಂದ 200 ಮೀಟರ್ ದೂರವಿರುವ ಪಂಪ್ಹೌಸ್ನಲ್ಲಿ ಪತ್ತೆಯಾಗಿದೆ. ತಾಯಿ ನೇಣುಬಿಗಿದ ಸ್ಥಿಯಲ್ಲಿರೋದನ್ನು ಕಂಡ ಮಗ ಮನುಕುಮಾರ್ ಶವ ಕೆಳಗಿಳಿಸಿದ್ದ. ಬಳಿಕ ಚೇಳೂರು ಪೊಲೀಸರಿಗೆ ಮಾಹಿತಿ ನೀಡಿದ್ದ ಎನ್ನಲಾಗಿದೆ.
ಮಗನಿಂದ ದೂರ ಮಾಡುವ ಚಿಂತೆ! ಸೊಸೆ ಕಾಟ ತಾಳಲಾರದೆ ಅತ್ತೆ ಆತ್ಮಹತ್ಯೆ?

