ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಿದ್ದು ಎಲ್ಲ ಪಕ್ಷಗಳ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಜೊತೆಗೆ ಮುಂದಿನ ಸಿಎಂ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಒಕ್ಕಲಿಗರ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಈ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.
ಸಿಎಂ ಆಗುವ ಬಗ್ಗೆ ಮಾತನಾಡುತ್ತಾ ದೆಹಲಿಯಲ್ಲಿ ಏನು ಆಗಬೇಕು ಅದು ತೀರ್ಮಾನ ಆಗಿದೆ ಎಂದು ಹೇಳಿದ್ದಾರೆ. ಹಾಗಿದ್ರೆ ಕೈ ಗೆಲುವಿನ ನಂತರ ಡಿಕೆಶಿ ಸಿಎಂ ಆಗಲಿದ್ದಾರಾ ಎನ್ನುವ ಅನುಮಾನ ಎಲ್ಲರನ್ನೂ ಕಾಡಿದೆ.
ಮೈಸೂರಿನ ಒಕ್ಕಲಿಗರ ಸಭೆಯಲ್ಲಿ ಮಾತನಾಡಿರುವ ಡಿ.ಕೆ ಶಿವಕುಮಾರ್, ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ 5 ವರ್ಷದ ಸರ್ಕಾರ ಅಲ್ಲ, 10 ವರ್ಷದ ಸರ್ಕಾರ. ದೆಹಲಿಯಲ್ಲಿ ಏನು ಆಗಬೇಕು ಅದು ತೀರ್ಮಾನ ಆಗಿದೆ. ಅದರ ಬಗ್ಗೆ ಚರ್ಚೆ ಬೇಡ, ಚರ್ಚೆ ಆಗೋದು ಬೇಡ ಎನ್ನುತ್ತಾ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪರೋಕ್ಷವಾಗಿ ಸಿಎಂ ಸ್ಥಾನ ಸಿಗುತ್ತೆ ಎಂದು ಹೇಳಿಕೆ ನೀಡಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ನೀಡಿರುವ ಈ ಹೇಳಿಕೆ ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿದೆ.