ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಅವರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದ್ದು, ಅಗತ್ಯ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆರೋಪಿಸಿದ್ದಾರೆ.
ದೆಹಲಿಯ ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬಿಜೆಪಿ ತನ್ನ ರಾಜಕೀಯ ಪ್ರತಿಸ್ಪರ್ಧಿ ಎಎಪಿಯನ್ನು ತೊಡೆದುಹಾಕುತ್ತಿದೆ. ಅವರನ್ನು ಉಗ್ರನಂತೆ ಬಂಧಿಸಲಾಗಿದೆ. ಅವರು ಮಾಡಿದ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.
ಜೈಲಿನಲ್ಲಿ ಗಾಜಿನ ಕೋಣೆಯಲ್ಲಿ ಕೇಜ್ರಿವಾಲ್ ಅವರನ್ನು ಮಾನ್ ಭೇಟಿಯಾದರು. ನಂತರ ಇಬ್ಬರೂ ವಿಪಕ್ಷ ನಾಯಕರು 30 ನಿಮಿಷಗಳ ಕಾಲ ದೂರವಾಣಿಯಲ್ಲಿ ಮಾತನಾಡಿದರು. ಅವರನ್ನು ನೋಡಿ ನಾನು ಭಾವುಕನಾದೆ ಎಂದು ಮಾನ್ ಹೇಳಿದ್ದಾರೆ.