ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಜಮೀರ್ ಅಹ್ಮದ್ ಖಾನ್ ಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಚಿತ್ರದುರ್ಗದಲ್ಲಿ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಚಿವ ಜಮೀರ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದುಬಂದಿದೆ.
ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಸಚಿವ ಜಮೀರ್ ಅವರಿಗೆ ತುರ್ತುಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಯಲ್ಲಿ ಹೃದಯ ತಜ್ಞ ಡಾ.ಕಾರ್ತಿಕ್, ಡಾ.ಸುಜಯ್ ರಿಂದ ತಪಾಸಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಜಮೀರ್ ಆರೋಗ್ಯದ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ.