ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೇ ಪ್ರಜಾಪ್ರಭುತ್ವ ಗೆದ್ದಂತೆ: ಸಚಿವ ಎಚ್.ಕೆ.ಪಾಟೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಪಕ್ಷದ ಗೆಲುವು ಪ್ರಜಾಪ್ರಭುತ್ವದ ವಿಜಯವಿದ್ದಂತೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ರೆಡ್ಡಿ ಸಮಾಜ ಸೇರಿದಂತೆ ವಿವಿಧ ಮುಖಂಡರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದ್ದು, ರಾಜ್ಯದಲ್ಲಿ ನ್ಯಾಯ ದೊರಕಿಸಲು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಶಕ್ತಿ ನೀಡಬೇಕಿದೆ. ಇಲ್ಲವಾದಲ್ಲಿ ಪ್ರಜಾಪ್ರಭುತ್ವಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಸಿದರು.

ಕಾಂಗ್ರೆಸ್ ಸರಕಾರ ಬಡವರಿಗಾಗಿ ಐದು ಖಾತ್ರಿ ಯೋಜನೆಗಳನ್ನು ಜಾರಿಗೆ ತಂದಿದೆ. ಗೃಹಲಕ್ಷ್ಮಿ ಯೋಜನೆ ದೇಶದಾದ್ಯಂತ ಅಪರೂಪದ ಕಾರ್ಯಕ್ರಮವಾಗಿದೆ. ಇದರ ಅನುಷ್ಠಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಶ್ರಮ ಸಾಕಷ್ಟಿದೆ.

98 ರಷ್ಟು ಜನರನ್ನು ತಲುಪಲು ಕಾಂಗ್ರೆಸ್ ಸರ್ಕಾರದ ಯೋಜನೆಗಳು. ನಿರ್ದಿಷ್ಟವಾಗಿ ಗೃಹಲಕ್ಷ್ಮಿ ಯೋಜನೆಯು ಒಂದು ಕ್ರಾಂತಿಕಾರಿ ಯೋಜನೆಯಾಗಿದೆ. ಅದರ ಯಶಸ್ಸಿಗೆ ಹಗಲಿರುಳು ಶ್ರಮಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!