ಹೊಸದಿಗಂತ ಡಿಜಿಟಲ್ ಡೆಸ್ಕ್:
ಎದೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಜಮೀಲ್ ಅಹ್ಮದ್ ಖಾನ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬೆಳಗ್ಗೆ ವಡೆ ತಿಂದಿದ್ದರಿಂದ ಹೊಟ್ಟೆ ಉಬ್ಬರಿಸಿಕೊಂಡು ಎದೆನೋವು ಉಂಟಾಗಿತ್ತು. ನಂತರ ಜಮೀರ್ ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಜಮೀರ್ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.