ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ, ಸಚಿವರಾದ ಎಂಬಿ ಪಾಟೀಲ್, ಶಿವಾನಂದ ಪಾಟೀಲ್ ಸೇರಿದಂತೆ ಹಲವು ಸ್ಥಳೀಯ ಮುಖಂಡರು ಇಂದು ಜಿಲ್ಲಾ ಚುನಾವಣಾ ಕಚೇರಿಗೆ ಬೃಹತ್ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಐ. ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ಲೋಕಸಭೆ ಚುನಾವಣೆ ದೃಷ್ಟಿಯಿಂದ ಮಾತ್ರ. ವಿಜಯೇಂದ್ರ ಅವರ ಅಧಿಕಾರಾವಧಿ ಮೂರು ವರ್ಷ ಮಾತ್ರ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೇ ಹೇಳಿದ್ದಾರೆ.
ಮುಂದಿನ ಸಾರ್ವತ್ರಿಕ ಚುನಾವಣೆಗೂ ಮುನ್ನ ಅವರನ್ನು ಕೆಳಗಿಳಿಸಲಾಗುವುದು ಎಂದರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಾಟೀಲ್, ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ, ಅಲ್ಲಿ ಏನೇ ನಿರ್ಧಾರ ಕೈಗೊಂಡರೂ ರಾಜ್ಯ ನಾಯಕರು ತಲೆಬಾಗಿ ಒಪ್ಪಿಕೊಳ್ಳುತ್ತಾರೆ ಎಂದು ಪಾಟೀಲ್ ಹೇಳಿದರು.
ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಎಷ್ಟು ಸ್ಥಾನ ಗೆಲ್ಲಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕನಿಷ್ಠ 20 ಸೀಟು ಸಿಗೋದು ನಿಶ್ಚಿತ 24 ಸಿಕ್ಕರೂ ಆಶ್ವರ್ಯವಿಲ್ಲ ಎಂದರು.