ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಸುವ ವೇಳೆ ಅವಘಡ ಸಂಭವಿಸಿದ್ದು, ಇಂದು ನಗರದ ಗಾಂಧಿ ಬಜಾರ್ ನಲ್ಲಿ ಎಲ್ ಇಡಿ ಬೋರ್ಡ್ ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಮಹಿಳೆ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಸುವ ವೇಳೆ ರ್ಯಾಲಿಯಲ್ಲಿ ಅಳವಡಿಸಲಾಗಿದ್ದ ಬೃಹತ್ ಎಲ್ ಇಡಿ ಬೋರ್ಡ್ ಕೆಳಗೆ ಬಿದ್ದಿದೆ ಎಂದು ತಿಳಿದುಬಂದಿದೆ.