ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಝೀಲಂ ನದಿಯಲ್ಲಿ ದೋಣಿ ಮುಳುಗಡೆಯಾಗಿದ್ದು ಹಲವರು ನಾಪತ್ತೆಯಾಗಿದ್ದಾರೆ ಎಂದು ನಂಬಲಾಗಿದೆ.
ಸ್ಥಳೀಯ ನಿವಾಸಿಗಳ ಪ್ರಕಾರ, ದೋಣಿಯಲ್ಲಿ ಹಲವಾರು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಇದ್ದರು ಎನ್ನಲಾಗಿದೆ. ಎಲ್ಲಾ RF ಗಳು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು. ಹೆಚ್ಚಿನ ವಿವರಗಳು ಇನ್ನೂ ಬಾಕಿ ಉಳಿದಿವೆ.
ಕಳೆದ ಎರಡು ದಿನಗಳಿಂದ ನಿರಂತರ ಮಳೆಯಿಂದಾಗಿ ನದಿಯ ಹರಿವು ಹೆಚ್ಚಾದ ಕಾರಣ ಈ ಘಟನೆ ಸಂಭವಿಸಿದೆ.